ಮಂಗಳೂರು: ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕೆ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ ಜೊತೆಗೆ ಸಾಮಾಜಿಕ ಕಾಳಜಿ, ಸಾಮಾಜಿಕ ಬದ್ಧತೆ, ದೇಶಪ್ರೇಮ ಪರಿಸರ ಕಾಳಜಿ ಬೆಳೆಸುತ್ತದೆ. ಈಗಿನ ಕಾಲಘಟ್ಟದಲ್ಲಿ ಅತೀ ಅಗತ್ಯ ಎಂದು ಚೂಂತಾರು ಸರೋಜಿನಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಅವರು ಅಭಿಪ್ರಾಯಪಟ್ಟರು.
ದಿನಾಂಕ 19-07-2022ನೇ ಮಂಗಳವಾರದಂದು ತಲಪಾಡಿ ಸಮೀಪದ ನಾರ್ಲಪಡೀಲ್ ಇಲ್ಲಿನ ದ. ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನಾರ್ಲ ಪಡೀಲ್ ಶಾಲೆಗೆ ಹಣ್ಣಿನ ಗಿಡಗಳನ್ನು ಚೂಂತಾರು ಸರೋಜಿನಿ ಪ್ರತಿಷ್ಠಾನದ ವತಿಯಿಂದ ವಿತರಿಸಲಾಯಿತು. ಹಲಸು, ಮಾವು, ನೇರಳೆ, ಶ್ರೀಗಂಧ, ಹೆಬ್ಬಲಸು ಮುಂತಾದ ಗಿಡಗಳನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಇವರಿಗೆ ಡಾ|| ಚೂಂತಾರು ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಾದ ಇಂದಿರಾ.ಜಿ, ಯಶೋಧ, ವಿಧ್ಯಾ ಉಪಸ್ಥಿತರಿದ್ದರು. ಸುಮಾರು 65 ಮಕ್ಕಳು ಈ ವನಮಹೋತ್ಸವ ಮತ್ತು ಗಿಡ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment