ಮಂಗಳೂರು: ಜುಲೈ 24ರಂದು ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾಗಿರುವ 9ನೇ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಶ್ರೀಕೃಷ್ಣಯ್ಯ ಅನಂತಪುರ ಅವರನ್ನು ಅವರ ನಿವಾಸದಲ್ಲಿ ಶುಕ್ರವಾರ ಅಧಿಕೃತವಾಗಿ ಆಮಂತ್ರಣ ಪತ್ರಿಕೆ ನೀಡಿ ಸಮ್ಮೇಳನಕ್ಕೆ ಆಮಂತ್ರಿಸಲಾಯಿತು.
ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ ಅವರು ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಿದರು. ಈ ಸಂದರ್ಭ ಶ್ರೀ ಶ್ರೀಕೃಷ್ಣಯ್ಯ ಅನಂತಪುರ ಅವರ ಧರ್ಮಪತ್ನಿ ಜಯಶ್ರೀ ಅನಂತಪುರ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق