ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯಾಸಭಾ ಸದಸ್ಯತ್ವ ನೀಡಿರುವುದು ಸ್ವಾಗತಾರ್ಹ: ಜೈನ್ ಮಿಲನ್ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್

ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯಾಸಭಾ ಸದಸ್ಯತ್ವ ನೀಡಿರುವುದು ಸ್ವಾಗತಾರ್ಹ: ಜೈನ್ ಮಿಲನ್ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್


ಮಂಗಳೂರು: ಶ್ರೀ ಕ್ಷೇತ್ರದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದನ್ನು ಭಾರತೀಯ ಜೈನ್ ಮಿಲನ್‌ನ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ.


ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ತನ್ನ ಜವಾಬ್ದಾರಿಯೊಂದಿಗೆ ಸಾಮಾಜಿಕವಾಗಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡು ಸಮಾಜದ ಕೆಳಸ್ಥರದಲ್ಲಿದ್ದ ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿ ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಯತ್ನವನ್ನು ಗೌರವಿಸಿ ಇದೀಗ ಕೇಂದ್ರ ಸರಕಾರವು ಡಾ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿರುವುದು ಅವರು ಮಾಡಿರುವ ಸಮಾಜ ಸೇವೆಗೆ ದೊರೆತ ಗೌರವ ಮಾತ್ರವಲ್ಲದೆ ಸಮುದಾಯಕ್ಕೆ ಸಿಕ್ಕ ಗೌರವವಾಗಿದೆ.


ಶಿಕ್ಷಣ, ಆರೋಗ್ಯ, ಸ್ತ್ರೀಶಕ್ತಿ ಸಂಘಟನೆಯ ಮೂಲಕ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿಯ ಯೋಜನೆಯ ಮೂಲಕ ಗ್ರಾಮಾಂತರ ಪ್ರದೇಶದ ಜನರ ಕಲ್ಯಾಣ, ಮಧ್ಯವರ್ಜನ ಶಿಬಿರದ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಕೃಷಿಗೆ ಉತ್ತೇಜನ, ಹೈನುಗಾರಿಕೆಗೆ ಉತ್ತೇಜನ, ಸಿರಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಉದ್ಯೋಗ, ಅನ್ನದಾನ, ಅಭಯದಾನ, ವಸ್ತçದಾನ, ನ್ಯಾಯದಾನ ಹೀಗೆ ಹತ್ತು ಹಲವು ಯೋಜನೆ, ಯೋಚನೆಯ ಮೂಲಕ ಧಾರ್ಮಿಕ ಚಟುವಟಿಕೆಯೊಂದಿಗೆ ಸಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದಕ್ಕೆ ಪೂರಕವಾಗಿ ಮತ್ತು ಗೌರವವಾಗಿ ಇದೀಗ ರಾಜ್ಯಸಭಾ ಸದಸ್ಯತ್ವ ನೀಡುವ ಮೂಲಕ ಅವರನ್ನು ಗುರುತಿಸಿದೆ ಎಂದು ಪುಷ್ಪರಾಜ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 تعليقات

إرسال تعليق

Post a Comment (0)

أحدث أقدم