ಕಡಬ : ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ದೋಲ್ಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಲೋಕೇಶ್(21) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ ಕೆಲ ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿದ್ದು, ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿತ್ತು. ಬುಧವಾರ(ಜು.13) ರ ತಡರಾತ್ರಿ ಈತ ವಿಷ ಸೇವಿಸಿದ್ದು, ವಾಂತಿ ಮಾಡುತ್ತಿದ್ದ ಎನ್ನಲಾಗಿದೆ.
ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾಗಿ ಹೇಳಲಾಗಿದೆ. ಮೃತರು, ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
Post a Comment