ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಂಕನಾಡಿ; ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ

ಕಂಕನಾಡಿ; ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ

 


ಮಂಗಳೂರು: ಇಲ್ಲಿನ ಕಂಕನಾಡಿಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆಯೊಂದು ನಡೆದಿದೆ.

ಶುಕ್ರವಾರ ತಡರಾತ್ರಿ 12.45ರ ವೇಳೆಗೆ ಕಂಕನಾಡಿ ರೈಲು ನಿಲ್ದಾಣದ ಬಳಿ ಅವಘಡ ಸಂಭವಿಸಿದೆ.

ಗೂಡ್ಸ್ ರೈಲು ಸಂಚರಿಸುವ ಸಂದರ್ಭದಲ್ಲಿ ಎರಡು ಬೋಗಿಗಳು ಹಳಿ ತಪ್ಪಿವೆ.

ಪರಿಣಾಮ ಬೋಗಿಗಳು ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಬಂದ ರೈಲ್ವೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಹಳಿ ತಪ್ಪಿದ ರೈಲಿನ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.

0 تعليقات

إرسال تعليق

Post a Comment (0)

أحدث أقدم