ಉಡುಪಿ : ಇಂದು ಬೆಳ್ಳಂಬೆಳ್ಳಗೆ ಕಾಪುವಿನಲ್ಲಿ ಕಾರು ರಸ್ತೆ ಹೊಂಡಕ್ಕೆ ಬಿದ್ದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆಯೊಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಗುಂಡಿಗಳಿಂದ ಕೂಡಿದ್ದು ಮಳೆ ಬಂದ ಪರಿಣಾಮ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿವೆ.
ಕಾಪು ಬಳಿ ಕಾರು ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದ ಪರಿಣಾಮ ಚಾಲಕಿಯ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಕಾರಿನ ಚಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
إرسال تعليق