ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿತ್ತು.
ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ.
Post a Comment