ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಬಳಿಯಿರುವ ಭೀಮಾ ನದಿ ಸೇತುವೆ ಹತ್ತಿರದ ಕ್ರಾಸ್ ನಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಶುಕ್ರವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಸಾವಿಗೀಡಾದ ಯುವಕರನ್ನು ಎಸ್ ಎನ್ ಹಿಪ್ಪರಗಿ ಗ್ರಾಮದ ಆಕಾಶ್ ಬಡಿಗೇರ್(21), ಶಿವು ಮ್ಯಾಗೇರಿ(21) ಮತ್ತು ಲಕ್ಷ್ಮಣ ಮಲ ಬಾಡಿ(18) ಎಂದು ಗುರುತಿಸಲಾಗಿದೆ.
ಡಿಕ್ಕಿ ರಭಸಕ್ಕೆ ಮೂವರು ಯುವಕರು ತಲೆ ಮತ್ತು ಎದೆಯ ಭಾಗದಲ್ಲಿ ಗಂಭೀರವಾದ ಗಾಯಗಳಾಗಿವೆ. ಇದರಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ಯುವಕರು ಚಿತ್ತಾಪುರ ತಾಲ್ಲೂಕಿನ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ಅಲ್ಲಿಂದ ಜೇವರ್ಗಿ ಕಡೆಗೆ ಹೊರಟಿದ್ದರು.
ಮಾರ್ಗ ಮಧ್ಯದಲ್ಲಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
Post a Comment