ಮಂಗಳೂರು: ಹೊಸ ಆಧಾರ್ ನೋಂದಣಿ, ಆಧಾರ್ ಕಾರ್ಡ್ ನಲ್ಲಿ ಫೋಟೋ ಮತ್ತು ಬೆರಳಚ್ಚು ತಿದ್ದುಪಡಿ, ಮೊಬೈಲ್ ನಂಬರ್ ಲಿಂಕ್, ಆಯುಷ್ಮಾನ್ ಕಾರ್ಡ್, ಈ ಶ್ರಮ್ ಕಾರ್ಡ್, ಜನ್ ಧನ್ ಬ್ಯಾಂಕ್ ಖಾತೆ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ ಮಾಸಿಕ ಪಿಂಚಣಿ ಯೋಜನೆ, ವಿಧವಾ ವೇತನ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಸಹಿತ ಸರಕಾರದ ವಿವಿಧ ಯೋಜನೆಗಳ ಲಾಭ ಸಾರ್ವಜನಿಕರಿಗೆ ದೊರಕಿಸುವ ಉಚಿತ ಜನಸ್ನೇಹಿ ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ನಾಗರಿಕರು ಭಾಗವಹಿಸಿ ಪ್ರಯೋಜನ ಪಡೆದುಕೊಂಡಿರುವುದು ಕಾರ್ಯಕ್ರಮದ ಯಶಸ್ಸು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು.
ಅವರು ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಗುರುಪುರ ಮಹಾಶಕ್ತಿ ಕೇಂದ್ರ, ಮಾತೃಭೂಮಿ ಸೌಹಾರ್ದ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಬೃಹತ್ ಉಚಿತ ಜನಸ್ನೇಹಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಂತಹ ಮಾದರಿ ಜನೋಪಯೋಗಿ ಕಾರ್ಯಕ್ರಮವನ್ನು ಆಯೋಜಿಸಿ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಶ್ರಮಿಸಿದ ಪ್ರತಿಯೊಬ್ಬರಿಗೂ ವಿಶೇಷ ಅಭಿನಂದನೆಗಳು ಎಂದು ಶಾಸಕರು ತಿಳಿಸಿದರು.
ಭಾನುವಾರ ಗುರುಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷರಾದ ಆರ್ ಸಿ ನಾರಾಯಣ್, ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ಉತ್ತರ ಮಂಡಲ ಉಸ್ತುವಾರಿ ಕಸ್ತೂರಿ ಪಂಜ, ಮಂಡಲ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾದ ಗಂಗಾಧರ್, ಪ್ರ.ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮೋರ್ಚಾ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment