ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುದ್ರೋಳಿ ದೇವಸ್ಥಾನದ ಮುಂಭಾಗ ರಸ್ತೆ ಉನ್ನತೀಕರಣ: ಕಾಮಗಾರಿ ಪರಿಶೀಲಿಸಿದ ಶಾಸಕ ಕಾಮತ್

ಕುದ್ರೋಳಿ ದೇವಸ್ಥಾನದ ಮುಂಭಾಗ ರಸ್ತೆ ಉನ್ನತೀಕರಣ: ಕಾಮಗಾರಿ ಪರಿಶೀಲಿಸಿದ ಶಾಸಕ ಕಾಮತ್


ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 


ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ‌ಕಾಮತ್, 75 ಲಕ್ಷ ರೂಪಾಯಿ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತಿದ್ದು ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲವೊಂದು ಕೆಲಸ ಬಾಕಿಯುಳಿದಿದೆ ಎಂದು ಹೇಳಿದರು.  


ಈ ರಸ್ತೆಯಲ್ಲಿದ್ದ ಹಳೆಯದಾದ ಒಳಚರಂಡಿ ಕೊಳವೆಗಳನ್ನು ಬದಲಾಯಿಸಿ ಹೊಸದಾಗಿ ಒಳಚರಂಡಿ ಜಾಲ ರಚಿಸಲಾಗಿದೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಹಾಗೂ ಗೈಲ್ ಗ್ಯಾಸ್ ಸಂಪರ್ಕದ ಪ್ರಮುಖ ಕೊಳವೆಗಳ ಅಳವಡಿಕೆ ಪೂರ್ಣಗೊಳಿಸಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ. ಪಾದಾಚಾರಿ ರಸ್ತೆ ನಿರ್ಮಾಣ ಹಾಗೂ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಲು ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ಅರುಣ್ ಶೇಟ್, ದಿನಕರ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಜನಾರ್ದನ ಕುಡ್ವ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم