ಮಂಗಳೂರು: ನಗರದ ಎ.ಜೆ ಆಸ್ಪತ್ರೆ ಬಳಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಫಾರ್ಚೂನರ್ ಕಾರೊಂದು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ.
ಕಾರಿನಲ್ಲಿ 10 ವರ್ಷದ ಒಂದು ಮಗುವೂ ಸೇರಿದಂತೆ 8 ಮಂದಿ ಪ್ರಯಾಣಿಕರಿದ್ದರು. ಕಾರು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರಿನ ಮುಂಭಾಗ ಹಾನಿಗೀಡಾಗಿದೆ.
ಅಪಘಾತದ ಪರಿಣಾಮ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಮಂಗಳೂರು ಎ.ಜೆ ಆಸ್ಪತ್ರೆ ಬಳಿ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತ#Accident #Mangalore pic.twitter.com/sTfSa0Mj3u
— Upayuktha News (@UpayukthaNews) July 18, 2022
Post a Comment