ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡೊಂಗರಕೇರಿ ವಾರ್ಡ್‌: ಬೋಜರಾಜ ಲೇನ್‌ ರಸ್ತೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕಾಮತ್

ಡೊಂಗರಕೇರಿ ವಾರ್ಡ್‌: ಬೋಜರಾಜ ಲೇನ್‌ ರಸ್ತೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕಾಮತ್


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಡೊಂಗರಕೇರಿ ವಾರ್ಡಿನ ಬೋಜರಾಜ ಲೇನ್ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ‌ ವೇದವ್ಯಾಸ್ ಕಾಮತ್ ಅವರು ಪರಿಶೀಲನೆ ನಡೆಸಿದರು. 


ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಜರಾಜ್ ಲೇನ್ ರಸ್ತೆಯ ಒಳಚರಂಡಿ ವ್ಯವಸ್ಥೆ ಪುನರ್ನಿರ್ಮಾಣ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಬಾಕಿಯುಳಿದಿರುವ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.


ಅತೀ ಹಳೆಯದಾಗಿದ್ದ ಈ ರಸ್ತೆಯ ಒಳಚರಂಡಿ ವ್ಯವಸ್ಥೆಯ ಪ್ರಮುಖ ಕೊಳವೆಗಳ ಬದಲಾವಣೆ ಮಾಡುವ ಅಗತ್ಯವಿರುವುದನ್ನು ಮನಗಂಡು ಅನುದಾನ ಒದಗಿಸಲಾಗಿದೆ. ಗೇಲ್ ಗ್ಯಾಸ್ ಲೈನ್ ಹಾಗೂ 24×7 ಕುಡಿಯುವ ನೀರು ಒದಗಿಸುವ ಜಲಸಿರಿ ಯೋಜನೆಯ ಪೈಪ್ ಅಳವಡಿಕೆ ಪೂರ್ಣಗೊಂಡ ತಕ್ಷಣವೇ ರಸ್ತೆ ಕಾಂಕ್ರೀಟಿನ ಕಾಮಗಾರಿ ಪ್ರಾರಂಭವಾಗಲಿದೆ. ಈ ಭಾಗದ ಜನರ ಸಮಸ್ಯೆಯನ್ನು ಮನಗಂಡು ಅತೀ ಶೀಘ್ರದಲ್ಲಿ ಯೋಜನೆ ಪೂರ್ಣಗೊಳಿಸಲು ಶಾಸಕ ಕಾಮತ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಅರುಣ್ ಶೇಟ್, ವಸಂತ್ ಜೆ ಪೂಜಾರಿ, ದಿನಕರ್ ಶೆಟ್ಟಿ, ಜನಾರ್ದನ್ ಕುಡ್ವ, ಕೇತನ್ ವರ್ಧನ್, ತರುಣ್ ಭಾಯ್ ಟಕ್ಕರ್, ಚೇತನ್ ಸುರೇಜಾ, ರಾಜೇಶ್ ಮಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم