ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮ

ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮ

 


ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಜಿಲ್ಲೆಯಲ್ಲಿ ಭಾರೀ ಮಳೆಗೆ 20ಕ್ಕೂ ಅಧಿಕ ಮನೆಗಳು ನೆಲಸಮವಾಗಿದೆ. ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಕತ್ರಿದಡ್ಡಿ, ದಿಂಡಲಕೊಪ್ಪ, ಗಲಗಿನಮಡಾ, ನಿಚ್ಚಣಕಿ, ದೇಗಾಂವ, ಚಿಕ್ಕನಂದಿಹಳ್ಳಿ, ತಿಗಡೊಳ್ಳಿ, ಬೈಲೂರು ಗ್ರಾಮಗಳಲ್ಲಿ ಮನೆ ಕುಸಿದಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

 ಖಾನಾಪುರ ತಾಲೂಕಿನ ಗುರ್ಲಗುಂಜಿ ಗ್ರಾಮದ ಸರ್ಕಾರಿ ಶಾಲೆ ಕೊಠಡಿ ಕುಸಿದಿದ್ದು, ಶಾಲೆಗೆ ರಜೆಯಿದ್ದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಖಾನಾಪುರ ತಾಲೂಕಿನ ಶಿಕ್ಷಣ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post