ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

 


ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ ಹಂದಿಗನೂರಿನಲ್ಲಿ ಈ ಘಟನೆ ನಡೆದಿದ್ದು, ಅವ್ವಮ್ಮಾ ಶ್ರೀಶೈಲ ಗುಬ್ಬೆವಾಡ (32) ತನ್ನ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಅವ್ವಮಾ ಕಳೆದ 6 ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದು, ಪತಿ ಶ್ರೀಶೈಲ ಗುಬ್ಬೆವಾಡ ಕುರಿಮೇಯಿಸಲು ಹೋಗಿದ್ದ ವೇಳೆ ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಮೂವರು ಮೃತದೇಹಗಳನ್ನು ಬಾವಿಯಿಂದ ಗ್ರಾಮಸ್ಥರು ಮೇಲೆತ್ತಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧಗಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.


0 Comments

Post a Comment

Post a Comment (0)

Previous Post Next Post