ಬೆಂಗಳೂರು : ಕನ್ನಡದ ಗೊಂಬೆ ಎಂದು ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.
ಇದೀಗ ಅವರು ಸಂತಸದ ಸುದ್ದಿಯೊಂದು ಹಂಚಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಒಂದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿರುವ ಸಂಸ್ಥೆ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ , ಅದನ್ನು ನಿವೇದಿತಾ ಮಾಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದುಕೊಂಡಿದೆ.
إرسال تعليق