ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪದವಿಗಿಂತ ಕಾರ್ಯಕರ್ತರು ಮುಖ್ಯ: ಡಾ. ಭರತ್ ಶೆಟ್ಟಿ ವೈ

ಪದವಿಗಿಂತ ಕಾರ್ಯಕರ್ತರು ಮುಖ್ಯ: ಡಾ. ಭರತ್ ಶೆಟ್ಟಿ ವೈ

ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ, ಧರಣಿ ನಡೆಸುವೆ: ಶಾಸಕ ಡಾ. ಭರತ್ ಶೆಟ್ಟಿ  ವೈ ಎಚ್ಚರಿಕೆ



ಮಂಗಳೂರು: ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.


ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ.


ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ  ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ ಎಂದು ಒತ್ತಾಯಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم