ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭ ಕೋರಿದ ಪ್ರಧಾನಿ ಮೋದಿ

ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭ ಕೋರಿದ ಪ್ರಧಾನಿ ಮೋದಿ

 


ನವದೆಹಲಿ: ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. 


ಜನರ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಎಷ್ಟು ಮಹತ್ವ ಎಂಬುದನ್ನು ಸ್ಮರಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ದೇಶದ ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಶಯಗಳು. ಜೀವ ಉಳಿಸುವಲ್ಲಿ ಮತ್ತು ನಮ್ಮ ಗ್ರಹವನ್ನು ಆರೋಗ್ಯಕರವಾಗಿಸುವಲ್ಲಿ ವೈದ್ಯರ ಪಾತ್ರ ಅಪಾರವಾಗಿದೆ ಎಂದು ನೆನೆದಿದ್ದಾರೆ.


 ಖ್ಯಾತ ವೈದ್ಯರು ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬಿಧನ್ ಚಂದ್ರರಾಯ್ ಅವರ ಗೌರವಾರ್ಥವಾಗಿ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

0 تعليقات

إرسال تعليق

Post a Comment (0)

أحدث أقدم