ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ.
ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು.
ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.
إرسال تعليق