ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ

 


ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ನೂ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮಾಧ್ಯಮ ದ ಜೊತೆಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ ನಿವೃತ್ತಿ, ಬಡ್ತಿ ಸೇರಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳಿಗೆ ಇನ್ಮುಂದೆ ಪ್ರತಿ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಪ್ರತಿ ವರ್ಷ ಶಿಕ್ಷಣ ಇಲಾಖೆಯಲ್ಲಿ ನಾಲ್ಕೈದು ಸಾವಿರ ಶಿಕ್ಷಕರು ನಿವೃತ್ತಿಯಾಗುತ್ತಾರೆ. ಖಾಲಿಯಾಗಿರುವ ಹುದ್ದೆಗಳನ್ನು ಆಯಾ ವರ್ಷವೇ ಭರ್ತಿ ಮಾಡುವ ಕುರಿತಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ ಅವರನ್ನು ಶಾಲೆಗೆ ನಿಯೋಜಿಸಲಾಗುವುದು. ಈ ಪೈಕಿ ಕನಿಷ್ಟ 12 ಸಾವಿರ ಹುದ್ದೆಗಳಾದರೂ ಭರ್ತಿಯಾಗುವ ನಿರೀಕ್ಷೆ ಇದೆ. ನೇಮಕಾತಿ ಪೂರ್ಣಗೊಂಡ ಬಳಿಕ ಖಾಲಿ ಉಳಿಯುವ ಹುದ್ದೆಗಳಿಗೆ ಜನವರಿಯಲ್ಲಿ ಮತ್ತೆ ಸಿಇಟಿ ನಡೆಸಿ ಮತ್ತೊಂದು ನೇಮಕಾತಿ ಪ್ರಕ್ರಿಯೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

0 Comments

Post a Comment

Post a Comment (0)

Previous Post Next Post