ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸುಳ್ಯ; ನಿನ್ನೆ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪ

ಸುಳ್ಯ; ನಿನ್ನೆ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪ

 


ಸುಳ್ಯ : ಇದೀಗ ಮೂರು ಬಾರಿ ಭೂಮಿ ಕಂಪಿಸಿದ ಸುಳ್ಯ ಹಾಗೂ ಕೊಡಗು ಗಡಿ ಭಾಗದಲ್ಲಿ ನಿನ್ನೆ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ.


ಮಧ್ಯ ರಾತ್ರಿ 1.15ರ ಸುಮಾರಿಗೆ ಈ ಕಂಪನ ಉಂಟಾಗಿದ್ದು ಜನ ಒಮ್ಮಲೇ ಎಚ್ಚರಗೊಂಡು ಭಯಭೀತರಾಗಿದ್ದಾರೆ.

ಆರಂಭದಲ್ಲಿ ದೊಡ್ಡ ಶಬ್ದ ಕೇಳಿದ್ದು, ನಂತರ ಅಲುಗಾಡಿದ ಅನುಭವವಾಯಿತು ಎಂದು ಜನ ಹೇಳಿಕೊಂಡಿದ್ದಾರೆ.

ಕೆಲವರಿಗೆ ಒಂದೆರಡು ಸೆಕೆಂಡುಗಳ ವ್ಯತ್ಯಾಸದಲ್ಲಿ ಎರಡು ಬಾರಿ ಈ ಅನುಭವವಾಗಿದೆ.

ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಸುಳ್ಯ, ಉಬರಡ್ಕ, ಎಲಿಮಲೆ, ಗುತ್ತಿಗಾರು ಪರಿಸರಗಳಲ್ಲಿ ಈ ಭೂಮಿ ಕಂಪನದ ಅನುಭವವಾಗಿದೆ.

0 تعليقات

إرسال تعليق

Post a Comment (0)

أحدث أقدم