ಬೆಂಗಳೂರು: ಕಿರುತೆರೆ ನಟಿ ಅಮೃತಾ ನಾಯ್ಡು ಮನೆಯಲ್ಲಿ ಇದೀಗ ನೋವು ಮರೆಯಾಗಿ ಸಂತಸ ತಂದಿದೆ. ನಟಿಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ.
ನಟಿ ಅಮೃತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ದಂಪತಿಗಳು ಸಂತೋಷದಲ್ಲಿದ್ದಾರೆ. ನಟಿ ಅಮೃತಾ ಜುಲೈ 2 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಈ ಸಂತೋಷದ ವಿಚಾರವನ್ನು ನಟಿ ಅಮೃತಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಅಮೃತಾ ದಂಪತಿಗಳು ಈಗಾಗಲೇ ಮುದ್ದಾದ ಮಗಳು ಸಮನ್ವಿ ಕಳೆದುಕೊಂಡ ನೋವಲ್ಲಿದ್ದರು. ಆದರೆ ಈ ಸಂತಸದ ಸುದ್ದಿ ನೋವನ್ನು ಕಡಿಮೆ ಮಾಡಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
Post a Comment