ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು

 


ಬೆಂಗಳೂರು:  ಕಿರುತೆರೆ ನಟಿ ಅಮೃತಾ ನಾಯ್ಡು ಮನೆಯಲ್ಲಿ ಇದೀಗ ನೋವು ಮರೆಯಾಗಿ ಸಂತಸ ತಂದಿದೆ. ನಟಿಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ.


ನಟಿ ಅಮೃತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ದಂಪತಿಗಳು ಸಂತೋಷದಲ್ಲಿದ್ದಾರೆ. ನಟಿ ಅಮೃತಾ ಜುಲೈ 2 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.


 ಈ ಸಂತೋಷದ ವಿಚಾರವನ್ನು ನಟಿ ಅಮೃತಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ. 


ಅಮೃತಾ ದಂಪತಿಗಳು ಈಗಾಗಲೇ ಮುದ್ದಾದ ಮಗಳು ಸಮನ್ವಿ ಕಳೆದುಕೊಂಡ ನೋವಲ್ಲಿದ್ದರು. ಆದರೆ ಈ ಸಂತಸದ ಸುದ್ದಿ ನೋವನ್ನು ಕಡಿಮೆ ಮಾಡಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم