ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಸಾವು

ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಸಾವು

 


ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆಯೊಂದು ಹೆದ್ದಾರಿಯ ಬನ್ನಿಕುಪ್ಪೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.


ಹುಣಸೂರು ತಾಲೂಕಿನ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ನಿವಾಸಿ ಚೇತನ್ ರಾಜ್ (24) ಮೃತ ದುರ್ದೈವಿ.

ಮೈಸೂರಿನಲ್ಲಿ ಅಂಗಡಿ ಇಟ್ಟು ಕೊಂಡಿರುವ ಚೇತನ್ ರಾಜ್ ತಮ್ಮ ಬೈಕಿನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಮೈಸೂರು- ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು‌ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.


ಭಾನುವಾರ ಬೆಳಗ್ಗೆ ದಾರಿ ಹೋಕರು ನೀಡಿದ ಮಾಹಿತಿ ಮೇರೆಗೆ ಬಿಳಿಕೆರೆ ಠಾಣಾ ಇನ್ಸ್ ಪೆಕ್ಟರ್ ಚಿಕ್ಕೆಸ್ವಾಮಿ ಹಾಗೂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


ಚೇತನ್ ರಾಜ್ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೋ ಅಥವಾ ಹೆದ್ದಾರಿಯಲ್ಲಿ ಯಾವುದಾದರೂ ವಾಹನ ಡಿಕ್ಕಿ ಹೊಡೆದಿದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಶವವನ್ನು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ

0 Comments

Post a Comment

Post a Comment (0)

Previous Post Next Post