ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರೀ ಮಳೆಗೆ ಗೃಹಪ್ರವೇಶಕ್ಕೆ ಸಿದ್ಧವಾದ ಮನೆ ನೆಲಸಮ

ಭಾರೀ ಮಳೆಗೆ ಗೃಹಪ್ರವೇಶಕ್ಕೆ ಸಿದ್ಧವಾದ ಮನೆ ನೆಲಸಮ

 


ಸುಳ್ಯ: ಭಾರೀ ಮಳೆಗೆ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾದ ಘಟನೆಯೊಂದು ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ನಡೆದಿದೆ.


ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಕಂಡಿತ್ತು.


ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. 


ಅಷ್ಟು ಹೊತ್ತಿಗಾಗಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

0 تعليقات

إرسال تعليق

Post a Comment (0)

أحدث أقدم