ರಾಯಪುರ : ಛತ್ತೀಸ್‌ಗಢದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ 45 ಲಕ್ಷ ರೂಪಾಯಿಯುಳ್ಳ ಬ್ಯಾಗ್ ಸಿಕ್ಕಿದ್ದು, ಈ ಬ್ಯಾಗ್ ಅನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್ ಅಧಿಕಾರಿ, 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.
ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ 2000 ಮತ್ತು 500 ರೂ. ನೋಟುಗಳ ಕಂತೆ ಕಂಡುಬಂದಿದೆ. ಈ ಬ್ಯಾಗ್ನಲ್ಲಿ ಒಟ್ಟು 45 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಿವಿಲ್ ಲೈನ್ಸ್ ಠಾಣೆಗೆ ಬ್ಯಾಗ್ ಅನ್ನು ಹಸ್ತಾಂತರಿಸಿದ್ದಾರೆ ಎಂದರು.
Post a Comment