ಕಾಪು : ಅಕ್ರಮವಾಗಿ ಗೋ ವಧೆ ಮಾಡಿ ಗೋ ಮಾಂಸವನ್ನು ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಸೇನಬ್ಬ ಹಾಗೂ ಶಂಶುದ್ಧೀನ್ ಪೊಲೀಸರು ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಅಕ್ರಮ ದನದ ಮಾಂಸ ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಇತರ ಸಿಬ್ಬಂದಿಗಳೊಂದಿಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಹೋಗಿ ನಿಂತು ವಾಹನಗಳನ್ನು ಪರಿಶೀಲಿಸುತ್ತಿದ್ದರು.
ಈ ವೇಳೆ ಸ್ಕೂಟರ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ತಡೆದು ಸ್ಕೂಟರ್ ನ್ನು ಪರಿಶೀಲಿಸಿದಾಗ ಸ್ಕೂಟರ್ ನಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಮಾತ್ರವಲ್ಲದೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ, ಬೀದಿ ಬದಿಯಲ್ಲಿನ ದನವನ್ನು ಕಳವು ಮಾಡಿ, ಗಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment