ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸಮೀಪ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅನ್ವರ್ ಖಾನ್ (55) ಮೃತಪಟ್ಟಿದ್ದಾರೆ.
ಶಿರಾ ನಗರದ ಅನ್ವರ್ ಖಾನ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನ್ನರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
إرسال تعليق