ಮಂಗಳೂರು: ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು (ಗುರುವಾರ, ಜುಲೈ 7) ಬೆಳಿಗ್ಗೆ ನಿಧನರಾದರು.
ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಇತ್ಯಾದಿಗಳನ್ನು ಪಡೆದಿರುವುದಲ್ಲದೆ ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.
ಯಕ್ಷಗಾನದ ಈ ಮೇರು ಕಲಾವಿದನ ನಿಧನಕ್ಕೆ ಯಕ್ಷಾಂಗಣ ಮಂಗಳೂರು ಮತ್ತು ಪುಳಿಂಚ ಪ್ರತಿಷ್ಠಾನ ಶ್ರದ್ಧಾಂಜಲಿ ಸಲ್ಲಿಸಿದೆ.
ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು. ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು.
ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ ಚಿನ್ನದ ಉಂಗುರದ ಸನ್ಮಾನ ಸ್ವೀಕರಿಸಿದ್ದಾರೆ. ಕರ್ನಾಟಕ ಮೇಳ ಒಂದರಲ್ಲೇ 35 ವರುಷಗಳ ತಿರುಗಾಟ ಮಾಡಿದ್ದಾರೆ.
ಉಳಿದಂತೆ ಮಧೂರು ಮೇಳ 1 ವರುಷ, ಸುರತ್ಕಲ್ ಮೇಳ 5 ವರುಷ. ಕದ್ರಿ ಮೇಳ 2 ವರುಷ. ಬಪ್ಪನಾಡು 1 ವರುಷ. ಕುಂಟಾರು ಮೇಳ 2 ವರುಷ. ಎಡನೀರು 1 ವರುಷ ಕಟೀಲು ಮೇಳದಲ್ಲಿ 3 ವರುಷ ತಿರುಗಾಟ ಮಾಡಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق