ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಯಕ್ಷಗಾನ ಕಲಾವಿದ ಮಜ್ಜಿಗೆಬೈಲು ಆನಂದ ಶೆಟ್ಟಿ ನಿಧನ

ಹಿರಿಯ ಯಕ್ಷಗಾನ ಕಲಾವಿದ ಮಜ್ಜಿಗೆಬೈಲು ಆನಂದ ಶೆಟ್ಟಿ ನಿಧನ


ಮಂಗಳೂರು: ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ (78 ವರ್ಷ) ನಿನ್ನೆ (10-7-2022) ಕುಂದಾಪುರ ತಾಲೂಕಿನ ಯಡಾಡಿಯ ಸ್ವಗೃಹದಲ್ಲಿ ರಾತ್ರಿ 7.37ಕ್ಕೆ ನಿಧನರಾದರು. ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.


ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೂಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ಹೀಗೆ ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.ಯಕ್ಷಗಾನ ಕಲಾರಂಗ, ಜಾಗತಿಕ ಬಂಟ ಪ್ರತಿಷ್ಠಾನ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.


ಪತ್ನಿ, ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಬಡಗು ತಿಟ್ಟಿನ ಈ ಪ್ರಾತಿನಿಧಿಕ ಕಲಾವಿದನ ನಿಧನಕ್ಕೆ ಉಡುಪಿಯ ಕಲಾರಂಗ ಮತ್ತು ಯಕ್ಷಾಂಗಣ ಮಂಗಳೂರು ತೀವ್ರ ಸಂತಾಪ ವ್ಯಕ್ತಪಡಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم