ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಂ ಅವರಿಗೆ ನಿನ್ನೆ ಮಧ್ಯಾಹ್ನ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದು, ವಿಷಯ ತಿಳಿದ ಅಭಿಮಾನಿಗಳು ನಟನಿಗೆ ಯಾವುದೇ ತೊಂದರೆ ಆಗದಿರಲಿ ಎಂದು ಪ್ರಾರ್ಥಿಸಿದ್ದರು.
ಇದೀಗ ಮಾಧ್ಯಮದ ಜೊತೆಗೆ ಮಾತಾನಾಡಿದ ವಿಕ್ರಂ ಪುತ್ರ ಸ್ಪಷ್ಟನೆ ನೀಡಿದ್ದಾರೆ.
ಸಂಜೆ ವೇಳೆಗೆ ವಿಕ್ರಂ ಆರೋಗ್ಯದ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ಚೆನ್ನೈನ ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು 'ವಿಕ್ರಂ ಆರೋಗ್ಯವಾಗಿದ್ದಾರೆ, ಅವರಿಗೆ ಎದೆ ನೋವಾಗಿದೆಯೇ ವಿನಃ ಅವರಿಗೆ ಹೃದಯಾಘಾತವಾಗಿಲ್ಲ" ಎಂದು ತಿಳಿಸಿದೆ.
ಇದೀಗ ವಿಕ್ರಂ ಅವರ ಪುತ್ರ ಧೃವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದು, ಅಭಿಮಾನಿಗಳಲ್ಲಿ, ಸಾರ್ವಜನಿಕರಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ಜೊತೆಗೆ ತಂದೆಯ ಆರೋಗ್ಯದ ಬಗ್ಗೆ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ.
"ಈ ಸಮಯದಲ್ಲಿ ಅವರಿಗೆ ಹಾಗೂ ನಮ್ಮ ಕುಟುಂಬಕ್ಕೆ ಖಾಸಗಿತನದ ಅವಶ್ಯಕತೆ ಇದೆ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ. ಚಿಯಾನ್ ವಿಕ್ರಂ ಈಗ ಆರಾಮವಾಗಿದ್ದಾರೆ, ಅವರು ಇನ್ನೊಂದು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನನ್ನ ಈ ಹೇಳಿಕೆಯು ಎಲ್ಲ ಸುಳ್ಳು ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿದೆ ಎಂದುಕೊಂಡಿದ್ದೇನೆ" ಎಂದು ಧೃವ್ ಬರೆದುಕೊಂಡಿದ್ದಾರೆ.
إرسال تعليق