ಬೆಂಗಳೂರು: ಸಿಲಿಂಡರ್ ಸ್ಫೋಟ ದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿದ್ದ ತಾಯಮ್ಮ (55) ಗಂಭೀರ ಗಾಯಗೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ.
ಗಾಯಗೊಂಡ ತಾಯಮ್ಮನನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.
ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ತಿರುಮಲಶೆಟ್ಟಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Post a Comment