ಚಿಕ್ಕಮಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಬಂದ್ ಆಗಿದೆ.
ನಿರಂತರ ಮಳೆಯಿಂದಾಗಿ ರಸ್ತೆಯ ಮೇಲೆಯೇ ಬೃಹತ್ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮಣ್ಣು, ಕಲ್ಲು, ಮರಗಳು ರಸ್ತೆಗೆ ಉರುಳಿದ್ದು, ಭಾರಿ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.
ನಾಲ್ಕೈದು ಮನೆಗಳ ಮೇಲೂ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಜೀವಭಯದಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ.
Post a Comment