ಉಪ್ಪಿನಂಗಡಿ: ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಘಟನೆಯೊಂದು ಇಳಂತಿಲ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ.
ಇವರು ರಾತ್ರಿ 10:30ರ ಹೊತ್ತಿಗೆ ಉಪ್ಪಿನಂಗಡಿಯಿಂದ ಮನೆಗೆ ಹೋಗುತ್ತಿದ್ದ ವೇಳೆ ಇಬ್ಬರು ಪರಿಚಯಸ್ಥ ವ್ಯಕ್ತಿಗಳು ಹಾಗೂ ನಾಲ್ಕು ಜನ ಅಪರಿಚಿತ ವ್ಯಕ್ತಿಗಳು ಬೈಕ್ ನ್ನು ಅಡ್ಡಗಟ್ಟಿ ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ, ಬಳಿಕ ಮಂಜುನಾಥ್ ಅವರ ತಮ್ಮನಿಗೂ ಕರೆ ಮಾಡಿ ಸ್ಥಳಕ್ಕೆ ಕರೆಸಿ ಆತನಿಗೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಗಾಯಾಳುಗಳು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Post a Comment