ಕುಂಬಳೆ: ದೇಶಕ್ಕಾಗಿ ನಮ್ಮ ಸೇವೆ, ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವತ್ತ ಪ್ರತಿಯೊಬ್ಬರು ಚಿಂತಿಸಿದರೆ ಮಾತ್ರ ನಮ್ಮ ಪೀಳಿಗೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳಾಗಬಲ್ಲರು. ಅವರಲ್ಲಿ ದೇಶ ಸ್ನೇಹದ ಚಿಂತನೆಯನ್ನು ಹರಿಯಬಿಡಬೇಕು. ಅಮೃತ ಮಹೋತ್ಸವವು ಪ್ರತೀ ಮನೆಮನಗಳಲ್ಲಿ ದೇಶಸ್ನೇಹದ ಬೀಜವನ್ನು ಬಿತ್ತುವಲ್ಲಿ ಕಾರಣವಾಗಿದೆ ಎಂದು ಲೆಕ್ಕಪರಿಶೋಧಕ ಕೃಷ್ಣ ಪ್ರಮೋದ್ ಮಂಗಳೂರು ಅಭಿಪ್ರಾಯಪಟ್ಟರು.
ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜಾರೋಹಗೈದು ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎನ್.ರಾವ್ ಮುನ್ನಿಪ್ಪಾಡಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಉಪಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಮಾತನಾಡಿದರು. ವಿದ್ಯಾರ್ಥಿಗಳಾದ ದೀಕ್ಷಿತ ಸ್ವಾಗತಿಸಿ, ತೇಜಸ್ವಿ ಧನ್ಯವಾದವಿತ್ತರು. ವಿದ್ಯಾರ್ಥಿ ಮನಿಷ್ ಕುಮಾರ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment