ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ

ಪುಂಜಾಲಕಟ್ಟೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ


ಪುಂಜಾಲಕಟ್ಟೆ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಆಂತರಿಕ ಗುಣಮಟ್ಟ ಭರವಸ ಕೋಶ, ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ ಹಾಗೂ ರೋವರ್ ರೇಂಜರ್ಸ್ ಘಟಕ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಕೆ.ಶರತ್ ಕುಮಾರ್ ಇವರು ಧ್ವಜಾರೋಹಣ ನೆರವೇರಿಸಿದರು.


ಬಳಿಕ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಹಳ್ಳಿಮನೆ ಹೈದರಾಲಿಯವರು ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ತಯಾರಿಸಲಾದ “ಸ್ವಾತಂತ್ರ್ಯ ಹಾದಿಯ ಅಮೃತ ಪುಷ್ಪಗಳು” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಗಿಡ  ನೆಡುವ   (ಪ್ಲಾಂಟೇಶನ್ ಡ್ರೈವ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


75 ವಿಧದ ಸಸ್ಯಗಳೊಂದಿಗೆ 75 ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾಲೇಜಿನ ಕ್ರೀಡಾಂಗಣದ ಸುತ್ತ-ಮುತ್ತ 75 ವಿಧದ  ಔಷಧೀಯ ಹಾಗೂ ಹಣ್ಣು-ಹಂಪಲಿನ ಗಿಡಗಳನ್ನು ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಎಲ್ಲ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



web counter

0 Comments

Post a Comment

Post a Comment (0)

Previous Post Next Post