ಉಳ್ಳಾಲ : ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ ಕಮರಿಗೆ ಉರುಳಿ ಬಿದ್ದಿದೆ.
ಮಂಜನಾಡಿ ನಿವಾಸಿ ಆಸೀಫ್ ಗಂಭೀರ ಗಾಯಗೊಂಡಿದ್ದು, ಸಹ ಸವಾರ ಅಂಬ್ಲಮೊಗರು ನಿವಾಸಿ ಮಹಮ್ಮದ್ ಅಶ್ರಫ್ ಗಾಯಗೊಂಡಿದ್ದಾರೆ. ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ ಪ್ರಯಾಣಿಕನಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಕೆಲಸ ಮುಗಿಸಿಕೊಂಡು ಉಳ್ಳಾಲ ಕಡೆಯಿಂದ ಕಾಪಿಕಾಡು ಕಡೆಗೆ ವಿರುದ್ಧ ದಿಕ್ಕಿನಲ್ಲಿ ಆಸೀಫ್ ಅವರು ತಮ್ಮ ಬೈಕ್‍ನಲ್ಲಿ ಮಹಮ್ಮದ್ ಅಶ್ರಫ್‍ರೊಂದಿಗೆ ತೆರಳುತ್ತಿದ್ದ ವೇಳೆ ಕುಂಪಲ ಕಡೆಯಿಂದ ಕೊಲ್ಯ ಮಾರ್ಗವಾಗಿ ಓವರ್ ಬ್ರಿಡ್ಜ್ ಕಡೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿದೆ.
ಮಂಗಳೂರು ದಕ್ಷಿಣ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Post a Comment