ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದು ರೈಲು ಹರಿದು ವಿದ್ಯಾರ್ಥಿನಿ ಸಾವು

ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದು ರೈಲು ಹರಿದು ವಿದ್ಯಾರ್ಥಿನಿ ಸಾವು




 ಹಾಸನ: ತಾಲೂಕಿನ ಅಂಕಪುರ ಗ್ರಾಮದ ಬಳಿ ಕಾಲು ಜಾರಿ ರೈಲ್ವೆ ಹಳಿ ಮೇಲೆ ಬಿದ್ದ ವಿದ್ಯಾರ್ಥಿನಿ ಮೇಲೆ ರೈಲು ಹರಿದಿರುವ ಘಟನೆಯೊಂದು ನಡೆದಿದೆ. ಇದರ ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಧಾರುಣವಾಗಿ ಸಾವನ್ನಪ್ಪಿದ್ದಾಳೆ.


ಗುಡ್ಡೆ ತೆರಣ್ಯ ಗ್ರಾಮದ ಪ್ರೀತಿ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮೊಸಳೆ ಹೊಸಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.


 ಇಂದು ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


 

0 Comments

Post a Comment

Post a Comment (0)

Previous Post Next Post