ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಬಡ್ಡಿ ಆಟಗಾರ ಸ್ಟಂಟ್ ಮಾಡಲು ಹೋಗಿ ಕುಸಿದು ಬಿದ್ದು, ಮೃತ್ಯು

ಕಬಡ್ಡಿ ಆಟಗಾರ ಸ್ಟಂಟ್ ಮಾಡಲು ಹೋಗಿ ಕುಸಿದು ಬಿದ್ದು, ಮೃತ್ಯು

 


ತಮಿಳುನಾಡು: ಇತ್ತೀಚೆಗೆ ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿ ಕಬಡ್ಡಿ ಆಟಗಾರ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಪಟ್ಟಣದಲ್ಲಿರುವ ಮಾರಿಯಮ್ಮನ್ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಆಗಸ್ಟ್ 8 ರಂದು ಈ ಘಟನೆ ನಡೆದಿದೆ.

34 ವರ್ಷದ ವಿನೋದ್ ಕುಮಾರ್ ಕಬಡ್ಡಿ ಆಟಗಾರ ತನ್ನ ತಂಡದೊಂದಿಗೆ ಉತ್ಸವದಲ್ಲಿ ಭಾಗವಹಿಸಿದ್ದರು.


ವಿನೋದ್ ಕುಮಾರ್ ಪಲ್ಟಿ ಹೊಡೆಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಪಲ್ಟಿ ಹೊಡೆಯುವಾಗ ಕುತ್ತಿಗೆಗೆ ಗಾಯವಾಗಿರಬಹುದು ಎಂದು ಶಂಕಿಸಲಾಗಿದೆ.

ವಿನೋದ್‌ ಅವರನ್ನು ತಕ್ಷಣ ಅರಣಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಅವರ ಸ್ಥಿತಿ ಸುಧಾರಿಸದಿದ್ದಾಗ ಅವರನ್ನು ಚೆನ್ನೈ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 15ರ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.


0 Comments

Post a Comment

Post a Comment (0)

Previous Post Next Post