ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ

ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿ ಪತ್ತೆ

 



ಕೇರಳ: ಇಲ್ಲಿನ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿದೆ. ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ಪಟ್ಟಣದ ನಿವಾಸಿಗಳು ಈ ಪ್ರದೇಶದಲ್ಲಿ ಕ್ವಾರಿಯೊಂದರ ಬಳಿ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.


ಬುಧವಾರದಂದು ಘಟನೆ ಬೆಳಕಿಗೆ ಬಂದಿದೆ.

ಪ್ರತಿ ಬಾಕ್ಸ್‌ನಲ್ಲಿ 200 ಸ್ಟಿಕ್‌ಗಳಂತೆ 40 ಬಾಕ್ಸ್‌ಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. 


ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಶೋರನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಫೋಟಕಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.


ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


0 تعليقات

إرسال تعليق

Post a Comment (0)

أحدث أقدم