ಕೊಡಗು: ವ್ಯಕ್ತಿಯೊಬ್ಬ ತನ್ನ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ ಮಾಡಿದ ಘಟನೆಯೊಂದು ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಸ್ಮಾ(43) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಕಿಶನ್ ಅಲಿಯಾಸ್ ಗೋಪಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
ಕಳೆದ ರಾತ್ರಿ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ, ಗಂಡ ಮತ್ತು ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಕಿಶನ್ ಕೋಪದಲ್ಲಿ ತನ್ನ ಹೆಂಡ್ತಿ ಚಸ್ಮಾ ಮೇಲೆ ಗುಂಡು ಹಾರಿಸಿದಂತೆ ಕಾಣಿಸುತ್ತದೆ.
ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕೊಲೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
إرسال تعليق