ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೊರಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ

ಹೊರಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವತಿ ನಾಪತ್ತೆ

 


ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿ ನಾಪತ್ತೆಯಾದ ಘಟನೆಯೊಂದು ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ.

ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ.


ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು.

ಕಳೆದ ಹದಿನೈದು ದಿನಗಳ ಹಿಂದೆ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಹೇಳಿದ್ದಾರೆ.

ಈ ಸಂಬಂಧ ಶಾಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم