ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ಪ್ರಕಾಶ್ ರೈ ಅವರ ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್ ಕೊಡುಗೆ

ನಟ ಪ್ರಕಾಶ್ ರೈ ಅವರ ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್ ಕೊಡುಗೆ

 


ಬೆಂಗಳೂರು: ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ 'ಅಪ್ಪು ಎಕ್ಸ್ ಪ್ರೆಸ್' ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ.

ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ ಎಂದು ಹೇಳಿದರು.

ಅಪ್ಪು ಬಾಲ್ಯದಿಂದಲೂ ನಾನು ನೋಡಿದ ಹುಡುಗ, ಆತ ಸಮಾಜಮುಖಿಯಾಗಿ ಬೆಳೆದ ವ್ಯಕ್ತಿ. ಆ ಎತ್ತರಕ್ಕೆ ಬೆಳೆದ ವ್ಯಕ್ತಿಯಿಂದ ಇನ್ನೊಂದಷ್ಟು ಕೆಲಸಗಳು ಆಗಬೇಕಾಗಿತ್ತು. ಆ ಜನಪರ ವ್ಯಕ್ತಿತ್ವವನ್ನು ಅನುಕರಿಸುವ ಭಾಗವಾಗಿ ಪ್ರತಿಷ್ಠಾನದಿಂದ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

0 Comments

Post a Comment

Post a Comment (0)

Previous Post Next Post