ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ


ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಬೆಳಗ್ಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಧ್ವಜಾರೋಹಣಗೈದರು. ಶಾಲಾ ಮಾತೃಸಮಿತಿ ಅಧ್ಯಕ್ಷೆ ರೇಶ್ಮಾ ಕನಕಪ್ಪಾಡಿ ಮಾತನಾಡಿದರು. ಸಂಚಾಲಕ ಜಯಪ್ರಕಾಶ ಪಜಿಲ, ಕಾರ್ಯದರ್ಶಿ ರಾಜಗೋಪಾಲ ಚುಳ್ಳಿಕ್ಕಾನ, ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಜೊತೆಗಿದ್ದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿಗೆ ಪೂರಕವಾದ ಸಾಂಸ್ಕೃತಿಕ ಸಂಭ್ರಮದ ಚಟುವಟಿಕೆಗಳು ಜರಗಿದವು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم