ಬೆಳ್ತಂಗಡಿ: ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಧ್ಯೇಯ ವನ್ನು ಹೊಂದಿರಬೇಕು. ಉತ್ತಮ ಚಾರಿತ್ರ್ಯವನ್ನು ಬೆಳೆಸಿಕೊಂಡು ದೇಶ ನಿರ್ಮಾಣದ ಸಂಕಲ್ಪ ತೊಡುವ ಪರಿಪಕ್ವ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದು ವಾಮದಪದವು ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ರವಿ ಎಂ. ಎನ್. ಅಭಿಪ್ರಾಯ ಪಟ್ಟರು.
ಅವರು ಇತ್ತೀಚೆಗೆ ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು, ವಿದ್ಯಾರ್ಥಿ ಸಂಘದ ಪದಾ ಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಧ್ಯಾಪಕ ರವಿ ಎಂ. ಎನ್. ರವರು 'ಕಲ್ಪನಾ ಚಾವ್ಲ' ರೇಂಜರ್ಸ್ ಘಟಕದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅಜಿತ್ ಆರಿಗರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂಧರ್ಭ ದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ನಡೆಸಿದ ಕ್ವಿಝ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ದ್ವೀತಿಯ ಪಿ ಯು ಸಿ ಪರೀಕ್ಷೆ ಯಲ್ಲಿ ಅರ್ಥಶಾಸ್ತ್ರ ಮತ್ತು ವಾಣಿಜ್ಯ ಶಾಸ್ತ್ರ ವಿಷಯ ಗಳಲ್ಲಿ ಉನ್ನತ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಉಪನ್ಯಾಸಕರ ವತಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು.
ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿಕ್ಷೇಮಾಭಿವೃದ್ಧಿ ನಿಧಿಯಿಂದ ಪುಸ್ತಕ ರೂಪದ ಬಹುಮಾನಗಳನ್ನು ನೀಡುವ ಕಾರ್ಯಕ್ರಮ ವನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಕೇತ ನಿರ್ವಹಿಸಿದರು. ವಿದ್ಯಾರ್ಥಿಸಂಯೋಜಕಿ ಶ್ರೀಮತಿ ಶಿಲ್ಪಾ ಪ್ರಸ್ತಾವನೆಗೈದರು. ರೇಂಜರ್ಸ್ ಘಟಕದ ಸಂಯೋಜಕಿ ಶ್ರೀಮತಿ ವಸಂತಿ ಸ್ವಾಗತಿಸಿ, ವಿದ್ಯಾರ್ಥಿಸಂಘದ ಸಹ ಸಂಯೋಜಕ ಶ್ರೀ ಗಂಗಾಧರಪ್ಪ ವಂದನಾರ್ಪಣೆ ಗೈದರು. ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಮೋಹನ ಗೌಡ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق