ಬೆಂಗಳೂರು : ಭಟ್ಕಳದ ಅತಿವೃಷ್ಟಿ ಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ(ಆ.3) ಸಂಜೆ 4 ಗಂಟೆಗೆ ಭೇಟಿ ನೀಡಲಿದ್ದಾರೆ. ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.
ಮುಖ್ಯಮಂತ್ರಿ ಬೆಂಗಳೂರಿನಿಂದ ವಿಮಾನ ಮೂಲಕ ಗೋವಾಕ್ಕೆ ತೆರಳಿ ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸುವರು.
ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಸಂಜೆ 6ಕ್ಕೆ ಹಿಂದಿರುಗಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಭಟ್ಕಳದಲ್ಲಿ ಸೋಮವಾರ ತಡರಾತ್ರಿಯಿಂದ ಭಾರೀ ಮಳೆಯಾಗಿದ್ದು, ಅಪಾರ ಹಾನಿ ಸಂಭವಿಸಿದೆ. ತಾಲೂಕಿನ ಮುಟ್ಟಳ್ಳಿ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು.
Post a Comment