ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಂದಾಪುರ ಪ್ಲೈಓವರ್ ಮೇಲೆ ವಿದ್ಯುತ್ ಪ್ರವಾಹ

ಕುಂದಾಪುರ ಪ್ಲೈಓವರ್ ಮೇಲೆ ವಿದ್ಯುತ್ ಪ್ರವಾಹ

 


ಕುಂದಾಪುರ : ಹೆದ್ದಾರಿಯಲ್ಲಿನ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ಟೆಸ್ಟರ್ ಮೂಲಕ ತೋರಿಸಿದ ವಿಡಿಯೋವೊಂದು ವೈರಲ್ ಆಗಿ ಆತಂಕಕ್ಕೆಡೆ ಮಾಡಿಕೊಟ್ಟ ಘಟನೆಯೊಂದು ಕುಂದಾಪುರದ  ಫ್ಲೈ ಓವರ್ ನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಇಬ್ಬರು ವ್ಯಕ್ತಿಗಳು ಈ ಪ್ರಾತ್ಯಕ್ಷಿಕೆ ಮಾಡಿ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.


ನವಯುಗ ಕನ್ ಸ್ಟ್ರಕ್ಷನ್ ನವರು ಹಲವಾರು ಸಮಸ್ಯೆಗಳ ನಡುವೆಯೇ ಫ್ಲೈ ಓವರ್ ನಿರ್ಮಿಸಿದ್ದರೂ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಳಿಕವೂ ದಾರಿದೀಪಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರಲಿಲ್ಲ. ಸಾರ್ವಜನಿಕರ ಹೋರಾಟದ ಬಳಿಕ ತರಾತುರಿಯಲ್ಲಿ ನಾಲ್ಕು ತಿಂಗಳ ಹಿಂದೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು.


ಇದೀಗ ವಿದ್ಯುತ್ ಸಂಪರ್ಕದಲ್ಲಿನ ಸಮಸ್ಯೆಯಿಂದಾಗಿ ಫ್ಲೈ ಓವರ್ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. 

0 تعليقات

إرسال تعليق

Post a Comment (0)

أحدث أقدم