ಸುಬ್ರಹ್ಮಣ್ಯ : ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ.
ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ.
ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- ಮಂಜೇಶ್ವರ ಅಂತರರಾಜ್ಯ ಸಂಪರ್ಕ ರಸ್ತೆಯ ಸೇತುವೆಯು ಮುಳುಗಡೆಯಾಗುವ ಸಾಧ್ಯತೆ ಇದೆ.
ದರ್ಪಣ ತೀರ್ಥ ನದಿಯ ತಟದಲ್ಲಿರುವ 12ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.
Post a Comment