ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ವಿಧಿವಶರಾಗಿದ್ದಾರೆ. ಮೈಸೂರಿನ ಸಿದ್ದರಾಮಯ್ಯನಹುಂಡಿ ನಿವಾಸಿಯಾಗಿದ್ದ 67 ವರ್ಷದ ರಾಮೇಗೌಡ ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ವೇಳೆ ರಾಮೇಗೌಡ ವಿಧಿವಶರಾದರು.
Post a Comment