ಮುಂಬೈ: ಶಿವಸಂಗ್ರಾಮ್ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಮಾಜಿ ಸದಸ್ಯ ವಿನಾಯಕ್ ಮೇಟೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಪುಣೆ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಇಲ್ಲಿನ ರಾಯಗಡ ಜಿಲ್ಲೆಯ ರಸಾಯನಿ ಪೊಲೀಸ್ ಠಾಣೆ ವ್ಯಾಪ್ತಿಯ ಮಡಪ್ ಗ್ರಾಮದ ಬಳಿ ಬೆಳಗ್ಗೆ 5 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮರಾಠಾ ಮೀಸಲಾತಿಯ ನಾಯಕರಾಗಿದ್ದ ಅವರು ಹಲವು ಹೋರಾಟಗಳ ಮೂಲಕ ಗುರುತಿಸಿಕೊಂಡಿದ್ದರು.
إرسال تعليق