ಬೆಂಗಳೂರು : ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ಯೋಗರಾಜ್ ಭಟ್ ನಿರ್ದೇಶನದ 'ಗಾಳಿಪಟ 2' ಮೊದಲ ದಿನವೇ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು ಸುಮಾರು 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.
ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ಮತ್ತೊಮ್ಮೆ ಗೆದ್ದಿದೆ.
ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ 'ಮುಂಗಾರು ಮಳೆ', 'ಗಾಳಿಪಟ 2' ಸೂಪರ್ ಹಿಟ್ ಆಗಿದ್ದವು. ಈಗ 'ಗಾಳಿಪಟ 2' ಬಿಡುಗಡೆಯಾದಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಮೊದಲ ದಿನವೇ 'ಗಾಳಿಪಟ 2' 900 ಪ್ರದರ್ಶನ ಕಂಡಿದೆ. ಬಹುತೇಕ ಕೇಂದ್ರಗಳಲ್ಲಿ ಹೌಸ್ ಫುಲ್ ಪ್ರದರ್ಶನಗೊಂಡಿರುವ ಚಿತ್ರ ರಾಜ್ಯದ ಮಲ್ಟಿಪ್ಲೆಕ್ಸ್ ಗಳಲ್ಲಿ 250 ಶೋ ಕಂಡಿದೆ.
150 ಸಿಂಗಲ್ಸ್ ಸ್ಕ್ರೀನ್ ಗಳಲ್ಲಿ 600ಕ್ಕೂ ಹೆಚ್ಚು ಪ್ರದರ್ಶನ ಕಂಡಿದೆ. ಹೊರರಾಜ್ಯಗಳಲ್ಲಿ 40 ಕೇಂದ್ರಗಳಲ್ಲಿ, ವಿದೇಶಗಳಲ್ಲಿ 50ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆ ಬರೆದಿದೆ. ಮೊದಲ ದಿನವೇ ಸುಮಾರು 20 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
Post a Comment